ಗೋಕಾಕ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಏಪ್ರಿಲ್ 14 ರ ನಂತರ ಲಾಕ್‌ಡೌನ್ ಹಂತಹಂತವಾಗಿ ತೆರವು ಗೊಳಿಸಲು ಕೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಂದು ಇಲ್ಲಿನ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಪತ್ರಕರ್ತರಿಗೆ ಮತ್ತು ನಗರಸಭೆ ಸದಸ್ಯರಿಗೆ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಿಸಿದ ಬಳಿಕ ಅವರು ಮಾತನಾಡಿದರು.
ಕೊರೋನಾ ಸೊಂಕು ಹರಡದಂತೆ ಲಾಕ್ ಡೌನ್ ಒಂದೇ ಉಪಾಯವಾಗಿದ್ದು ಸಹ ದೇಶದ ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಸರ್ಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಸಲಹೆ ನೀಡಿದರು.
ಬೇರೆ ಬೇರೆ ರಾಜ್ಯಗಳಿಂದ ಸರಕು ಸಾಗಾಣಿಕೆಯ ಮತ್ತು ಇನ್ನುಳಿದ ದೈನಂದಿನ ವಸ್ತುಗಳ ಸರಬರಾಜು ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಬಾಕಿ ಉಳಿದ ಸರ್ಕಾರಿ ಕಾರ್ಯಗಳನ್ನು ಪೂರ್ಣಗೊಳಿಸಲು ಕಚೇರಿಗಳನ್ನು ಸ್ಥಾಪಿಸಬೇಕು ಎಂದರು.
ಚಪ್ಪಾಳೆ ಮತ್ತು ದೀಪ ಬೆಳಗುವುದು ವೈಜ್ಞಾನಿಕ ಕ್ರಮವಾಗಿದ್ದರೆ ಖಂಡಿತ ಅದನ್ನು ಸ್ವಾಗತಿಸುತ್ತದೆ. ಇಂತಹ ಟಾಸ್ಕಗಳಿಂದ ಲಾಕ್ ಡೌನ್ ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದರು.