Breaking News

ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ

Spread the love

ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ನಂದನವನವಾಗುವ ಕಾಲ ಸನ್ನಿಹಿತವಾಗಿದೆ. ಪ್ರತಿ ಕ್ಷೇತ್ರಗಳಿಗೂ ವಿಶೇಷ ಆಧ್ಯತೆ ನೀಡುವ ಮೂಲಕ ಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಸಾವಿರಾರು ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಿದ್ದಾರೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.
ತಾಲೂಕಿನ ಕುಲಗೋಡ ಗ್ರಾಮದಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣದ ಆವರಣ ಗೋಡೆ ಹಾಗೂ ಸಿ.ಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕುಲಗೋಡ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಜಾರಿಯಾಗಿವೆ. ಇದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯೇ ಕಾರಣವಾಗಿದೆ ಎಂದು ಹೇಳಿದರು.
ಯುವ ಮುಖಂಡ ನಾಗಪ್ಪ ಶೇಖರಗೋಳ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ತಾಪಂ ಮಾಜಿ ಸದಸ್ಯ ಸುಭಾಸ ವಂಟಗೋಡಿ, ಗ್ರಾಪಂ ಅಧ್ಯಕ್ಷೆ ಶಕುಂತಲಾ ಚಿಪ್ಪಲಕಟ್ಟಿ, ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ಸುಶೀಲಾ ಮಳಲಿ, ಯಲ್ಲವ್ವಾ ಲಕ್ಷ್ಮೇಶ್ವರ, ಗೋಪಾಲ ತಿಪ್ಪಿಮನಿ, ಬಸವರಾಜ ಯರಗಟ್ಟಿ, ರಾಜು ಯಕ್ಷಂಬಿ, ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ

Spread the loveಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ