Breaking News

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ

Spread the love

ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಎಸ್‍ಎಲ್‍ಜೆ ಪ್ರೌಢಶಾಲೆಯ ಶಿಕ್ಷಕ ಆರ್.ಎಮ್.ದೇಶಪಾಂಡೆ ಹೇಳಿದರು.
ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ತಿಳಿಸಿದ ಅವರು, ಮಹಿಳೆಯರು ವೈಜ್ಞಾನಿಕ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಲು ಸರ್ಕಾರ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಅದರ ಸದುಪಯೋಗ ಪಡಿಸಿಕೊಂಡು ಇತರರಲ್ಲೂ ಜಾಗೃತಿಯನ್ನು ಮೂಡಿಸಿದಾಗ ಮಾತ್ರ ವಿಜ್ಞಾನ ದಿನಾಚರಣೆ ಆಚರಿಸುವುದಕ್ಕೂ ಸಾರ್ಥಕವಾಗುತ್ತದೆ. ಪ್ರಥಮವಾಗಿ ನೊಬೆಲ್ ಪ್ರಶಸ್ತಿ ಪಡೆದ ದೇಶದ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರಂತೆ ಸಂಶೋಧಕರಾಗಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಉದ್ಘಾಟಿಸಿದರು. ವೇದಿಕೆ ಮೇಲೆ ಪ್ರಾಚಾರ್ಯ ಪಿ.ಎಸ್.ತಳವಾರ, ಉಪನ್ಯಾಸಕ ಡಿ.ಬಿ,ತಳವಾರ, ವಿದ್ಯಾರ್ಥಿ ಪ್ರತಿನಿಧಿ ಶಿವಲಿಂಗ ಹಿಡೋಜಿ ಇದ್ದರು.
ಸುನಂದಾ ಪೂಜಾರಿ ಹಾಗೂ ಜ್ಯೋತಿ ಧರ್ಮಟ್ಟಿ ಸ್ವಾಗತಿಸಿದರು, ತೇಜಸ್ವೀನಿ ತಳವಾರ ನಿರೂಪಿಸಿದರು, ಮಂಜುಳಾ ಆಶಿರೊಟ್ಟಿ ವಂದಿಸಿದರು.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ