Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ

ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ

Spread the love

ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು.


ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ ಕಾಪಾಡುತ್ತಿದ್ದಾರೆ. ಬೀಜ ಗೊಬ್ಬರಗಳ ದಾಸ್ತಾನು ರಾಜ್ಯದಲ್ಲಿ ಸಾಕಷ್ಟು ಮಾಡಲಾಗಿದೆ. ಕರೋನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.

                                          ರೈತರು ಇವುಗಳ ಸದುಪಯೋಗದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಸದಸ್ಯ ಎಸ್ ಎ ಕೋತವಾಲ, ಕೃಷಿ ಸಹಾಯಕ ನಿರ್ದೇಶಕ ಎಮ್ ಎಮ್ ನದಾಫ್ ಸೇರಿದಂತೆ ಅನೇಕರು ಇದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ