ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್ (ಫುಲ್ ರೇಕ್) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ ರೈತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಉಭಯ ತಾಲೂಕುಗಳಲ್ಲಿ ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಅರಿಷಿನ ಬೆಳೆಗಳಿವೆ. ಶೇ 90 ರಷ್ಟು ಪ್ರದೇಶವು ನೀರಾವರಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 45,600 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಪ್ರಸ್ತುತ ಶೇ.
Laxmi News 24×7