ಗೋಕಾಕ: ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯಾದ್ಯಂತ ನಮ್ಮ ಬೆಂಬಲಿಗರು ಯಶಸ್ವಿಯಾಗಿ ಬಸವ ಪಂಚಮಿ ಆಚರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರ ಪಂಚಮಿಯಂದು ಪ್ರತಿ ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದೆ. ಹಾವುಗಳು ಎಂದು ಹಾಲು ಕುಡಿಯುವುದಿಲ್ಲ. ಮೂಢನಂಬಿಕೆ ಆಚರಿಸುವ ಬದಲು ಅದೇ ಹಾಲನ್ನು ಬಡ ಮಕ್ಕಳಿಗೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುಲು ಅಭಿಯಾನ ಆರಂಭಿಸಿದ್ದೇವೆ. ರಾಜ್ಯಾದ್ಯಂತ ಯಶಸ್ವಿಯಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದ್ರು.
Laxmi News 24×7