Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಂಭಾವ್ಯ ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಪೂರ್ವಭಾವಿ ಸಭೆ

ಸಂಭಾವ್ಯ ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಪೂರ್ವಭಾವಿ ಸಭೆ

Spread the love

ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಶ್ರೀ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದಲ್ಲದೆ ಕಾಳಜಿ ಕೇಂದ್ರಗಳಿಗಾಗಿ ಕಟ್ಟಡಗಳನ್ನು ಗುರುತಿಸಿ ಜನರ ಸ್ಥಳಾಂತರಕ್ಕಾಗಿ ಕ್ರಮವಹಿಸುವುದು ಮತ್ತು ರೋಗ ರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಇತ್ಯಾದಿಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ತಹಶೀಲ್ದಾರ ಗೋಕಾಕ ರವರು ಮಾತನಾಡಿ ತಾಲೂಕು ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ 08332-225073 ಇರುತ್ತದೆ ಎಂದೂ, ಪ್ರವಾಹ ಪೀಡಿತವಾಗುವ ಸಂಭಾವ್ಯ ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳನ್ನು ನೂಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಮತ್ತು ಯಾವುದೇ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದಲ್ಲಿ ತಕ್ಷಣ ಸ್ಪಂದಿಸಲು ತಾಲೂಕು ಆಡಳಿತದಿಂದ ಸಂಪೂರ್ಣ ಸಿಧ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರಸಭೆ ಆಯುಕ್ತರಾದ ಶ್ರೀ ಶಿವಾನಂದ ಹಿರೇಮಠ, ವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಕೆ.ಎನ್ ವಣ್ಣೂರ, ಕೃಷಿ ಇಲಾಖೆಯ ಶ್ರೀ ಎಮ್ ಎಮ್ ನದಾಫ , ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಶ್ರೀ ಎಸ್ ಪಿ ವರಾಳೆ, ಪಶು ವೈದ್ಯಕೀಯ ಇಲಾಖೆಯ ಶ್ರೀ ಮೋಹನ ಕಮತ, ಘಟಪ್ರಭಾ ಮುಖ್ಯಾಧಿಕಾರಿ ಶ್ರೀ ಕೆಂಪಣ್ಣ ಪಾಟೀಲ, ಆರಕ್ಷಕ ಉಪನಿರೀಕ್ಷಕರು ಗೋಕಾಕ ಶಹರ ಹಾಗೂ GRBC ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಶ್ರೀ ವಿ ಸಿ ಪತ್ತಾರ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ