ಹಾವೇರಿ: ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆಯ್ದ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಬಟ್ಟೆ-ಬಂಗಾರ ಮಾರಾಟದ ಅಂಗಡಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆಯೇ ಹಾಗೂ ನಿಯಮ ಪಾಲಿಸಲಾಗತ್ತಿದೆಯೇ ಎಂಬುದನ್ನು ಪರಿಶೀಲಿಸಲು ಇಂದು ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ನಗರ ಸಂಚಾರ ಕೈಗೊಂಡು ಜಾಗೃತಿ ಮೂಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್, ಪೌರಾಯುಕ್ತ ಬಸವರಾಜ ಜಿದ್ದಿ ಅವರು ಹಾವೇರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.
Check Also
ತಹಶೀಲ್ದಾರ್ ಕಚೇರಿಯಲ್ಲಿ ಕೊಡೆ ಹಿಡಿದು ಕೆಲಸ
Spread the love ಹಾವೇರಿ: ಇಲ್ಲಿಯ ತಹಶೀಲ್ದಾರ್ ಕಚೇರಿಯು ಹಲವು ವರ್ಷಗಳಿಂದ ಶಿಥಿಲ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿದೆ. …