Breaking News

ವಧುವಿನ ಸಹೋದರಿಗೆ ಸೋಂಕು :ವಧು ಸೇರಿ 19 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ

Spread the love

ಹಾವೇರಿ:  ಇನ್ನೇನು ಕೆಲವೇ ಗಂಟೆಗಳಲ್ಲಿ ಯುವತಿಯೊಬ್ಬಳ ಮದುವೆ ನಡೆಯಬೇಕಿದ್ದು, ಆದ್ರೆ ವಧುವಿನ ಸಹೋದರಿಗೆ ಕೊರೊನಾ ಸೋಂಕು  ದೃಢವಾದ ಹಿನ್ನೆಲೆಯಲ್ಲಿ ಮದುವೆ ಮುಂದೂಡಿ ವಧು ಸೇರಿ 19 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಹಾವೇರಿ ನಗರದ ನಾಗೇಂದ್ರನಮಟ್ಟಿಯಲ್ಲಿ  ಭಾನುವಾರ ನಡೆದಿದೆ.  ವಧುವಿನ ಸಹೋದರಿಗೆ ಸೋಂಕು ಇರುವುದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ದೃಢಪಡಿಸಿದೆ.  ಇಲಾಖೆ ಸಂಜೆ ಬಿಡುಗಡೆ ಮಾಡುವ ಆರೋಗ್ಯ ಬುಲೆಟಿನ್ ಮೂಲಕ ಅಧಿಕೃತ ಮಾಹಿತಿ ನೀಡಬೇಕಿದೆ.

ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ ಜಿಲ್ಲಾಡಳಿತ ಸೋಂಕಿತೆ ವಾಸವಿದ್ದ ಪ್ರದೇಶವನ್ನು ಸೀಲ್ ಡೌನ್ ಮಾಡಿದೆ.  ರವಿವಾರ ನಡೆಯಬೇಕಿದ್ದ ಮದುವೆಯನ್ನು ರದ್ದುಗೊಳಿಸಿದೆ.‌ ವಧು ಸೇರಿ 19 ಕ್ಕೂ ಹೆಚ್ಚು ಸಂಬಂಧಿಕರನ್ನು ಸೋಂಕಿತೆಯ ಸಂಪರ್ಕಿತರೆಂದು ಪರಿಗಣಿಸಿ ಕ್ವಾರಂಟೈನ್ ಮಾಡಿದೆ.


Spread the love

About Laxminews 24x7

Check Also

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Spread the love ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ  ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ