Breaking News

ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ

Spread the love

ಹಾವೇರಿ: ಮೈಸೂರು ಜಿಲ್ಲೆಯ ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿನ ಸುದ್ದಿ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂತಹ ಘಟನೆ ನಡೆದಿದೆ. ಹೌದು, ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಸವೇಶ್ವರ ನಗರದಲ್ಲಿ ಇಂದು ನಡೆದಿದೆ.

ಡಾ. ಜಗದೀಶ್ ಗೊಡ್ಡೆಮ್ಮಿ (47) ಎಂಬುವರೇ ಆತ್ಮಹತ್ಯೆಗೆ ಶರಣಾದ ವೈದ್ಯರಾಗಿದ್ದಾರೆ. ಮೃತ ಜಗದೀಶ್ ನಗರದ ಗೌರಮ್ಮ ಸ್ಮಾರಕ ಮೊಮೊರಿಯಲ್ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಡಾ. ಜಗದೀಶ್ ಗೊಡ್ಡೆಮ್ಮಿ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

Spread the loveಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ