ಹಾವೇರಿ : ಓಮ್ನಿ ಕಾರಿನಲ್ಲಿ ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯ ದೇವಸ್ಥಾನಕ್ಕೆ ನಾಲ್ವರು ಕುಟುಂಬಸ್ಥರು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ, ಧಗಧಗನೆ ಹೊತ್ತಿ ಉರಿದಿದೆ.
ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ದಾರಿ ಹೋಕರು ಚಾಲನಕನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಕೂಡಲೇ ಕಾಲು ನಿಲ್ಲಿಸಿ, ಅದರಲ್ಲಿದ್ದ ಎಲ್ಲರೂ ಕೆಳಗೆ ಇಳಿದಿದ್ದಾರೆ
ಹೀಗಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7