ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೇಹೊನ್ನತ್ತಿ ಗ್ರಾಮ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಅವರು, ನಿನ್ನೆ ಸೋಂಕಿನ ಪ್ರಕರಣದ ಕಾರಣದಿಂದಾಗಿ ಶಾಲೆಯಲ್ಲಿ ಕೊರೋನಾ ಪರೀಕ್ಷೆಯನ್ನು ಮಾಡಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 11 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಸೋಂಕಿತ ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಸಮಸ್ಯೆ ಆಗಿಲ್ಲ. ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.
Laxmi News 24×7