ಬೆಂಗಳೂರು, ಮಾ.21: ಸಾರ್ವತ್ರಿಕ ರಜಾ ದಿನಗಳು ಸೇರಿದಂತೆ ಮಾ.31 ರವರೆಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯಾವ ಅಧಿಕಾರಿಯೂ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಇಲಾಖೆ ಸೂಚನೆ ನೀಡಿದೆ.
ಈ ಹಿಂದೆ ಎರಡು ವಾರಗಳಿಗೆ ಸೀಮಿತವಾಗಿದ್ದ ನಿರ್ಬಂಧ ಹೇರಲಾಗಿತ್ತು. ಆದರೆ, ಕೊರೋನ ಮಹಾಮಾರಿ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದ್ದು, ಈ ತಿಂಗಳ ಅಂತ್ಯದವರೆಗೂ ಆರೋಗ್ಯ ಸೇವೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಜೆ ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ಹೇಳಲಾಗಿದೆ.