Breaking News
Home / ಜಿಲ್ಲೆ / ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ

Spread the love

ಹುಬ್ಬಳ್ಳಿ: ಇಲ್ಲಿನ ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್‌ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ.

ಇತ್ತೀಚೆಗೆ ಎಸ್‌ಡಿಎಂ ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಕೋವಿಡ್‌ ಆಗಿತ್ತು.

ಜೋಶಿ ಶಾಲೆಯ ವಿದ್ಯಾರ್ಥಿ ಅಲ್ಲಿನವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು.

‘ಜೋಶಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಕೋವಿಡ್‌ ದೃಢವಾಗಿದ್ದು, ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದ ಮಾಹಿತಿ ನೀಡಬೇಕು. ಪಡೆದಿಲ್ಲವಾದರೆ ತಕ್ಷಣವೇ ಲಸಿಕೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ’ ಎಂದು ಹುಬ್ಬಳ್ಳಿ ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಹೇಳಿದರು.

ಆ ಶಾಲೆಯ ಎಲ್ಲ ಸಿಬ್ಬಂದಿ ಹಾಗೂ ಮಕ್ಕಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಡಳಿತ ಮಂಡಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

 


Spread the love

About Laxminews 24x7

Check Also

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

Spread the loveಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ