Breaking News
Home / ಜಿಲ್ಲೆ / 7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

Spread the love

ಹುಬ್ಬಳ್ಳಿ: ಜಿಲ್ಲೆಯಾದ್ಯಂತ ದಿನೇ ದಿನೇ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸೋಂಕಿತರನ್ನು ಕರೆ ತರಲು ಹೆಚ್ಚುವರಿಯಾಗಿ 7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಗ್ರಾಮಗಳ ಮಟ್ಟದಲ್ಲೂ ಕೊರೊನಾ ಹರಡುತ್ತಿದೆ. ಪ್ರಕರಣಗಳು ಏರುಗತಿಯಲ್ಲೇ ಸಾಗಿದರೆ, ಹುಬ್ಬಳ್ಳಿಯಲ್ಲಿರುವ ಕಿಮ್ಸ್‌ ಕೋವಿಡ್-19 ಆಸ್ಪತ್ರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸೋಂಕಿತರನ್ನು ಕರೆ ತರುವುದು ಸವಾಲಾಗಲಿದೆ. ಹಾಗಾಗಿ, ಆಂಬುಲೆನ್ಸ್‌ಗಳ ಕೊರತೆ ಎದುರಾಗದಿರಲೆಂದು, ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದೆ.

ಏಳು ಮೀಸಲು: ‘ಸದ್ಯ ಏಳು ಆಂಬುಲೆನ್ಸ್‌ಗಳನ್ನು ಕೋವಿಡ್‌ಗಾಗಿಯೇ ಮೀಸಲಿಡಲಾಗಿದೆ. ಜಿಲ್ಲಾ ಕೇಂದ್ರದಲ್ಲಿರುವ ಈ ವಾಹನಗಳು ಸೋಂಕಿತರು ಎಲ್ಲಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ’ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಯಶವಂತ ಮದಿನಕರ

‘ತಾಲ್ಲೂಕು ಮಟ್ಟದಲ್ಲಿರುವ ಆಂಬುಲೆನ್ಸ್‌ಗಳನ್ನು ಕೋವಿಡ್‌ ಉದ್ದೇಶಕ್ಕೆ ಬಳಸುತ್ತಿಲ್ಲ. ಸೋಂಕು ಹರಡುವಿಕೆ ಹೀಗೆ ಹೆಚ್ಚಾದರೆ, ಮುಂದೆ ತಾಲ್ಲೂಕುಗಳಿಗೂ ಒಂದೊಂದು ಆಂಬುಲೆನ್ಸ್ ಬೇಕಾಗಬಹುದು. ಹಾಗಾಗಿ, ಹೆಚ್ಚುವರಿಯಾಗಿ ಖಾಸಗಿಯವರಿಂದ 7 ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆದು ಸನ್ನದ್ಧ ಸ್ಥಿತಿಯಲ್ಲಿಡಲಾಗುವುದು’ ಎಂದರು.

ಪಾಳಿಯಲ್ಲಿ ಕೆಲಸ: ‘ಕೋವಿಡ್‌ ರೋಗಿಗಳನ್ನು ಕರೆತರುವ ಆಂಬುಲೆನ್ಸ್‌ಗಳಲ್ಲಿ ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಚಾಲಕರು ಕಾರ್ಯ ನಿರ್ವಹಿಸುತ್ತಾರೆ. ಅವರೊಂದಿಗೆ ಇಬ್ಬರು ಆರೋಗ್ಯ ಸಿಬ್ಬಂದಿಯೂ ಇರುತ್ತಾರೆ. ಸೋಂಕಿತರನ್ನು ಕರೆದುಕೊಂಡು ಬಂದ ಬಳಿಕ, ವಾಹನಕ್ಕೆ ಸ್ಯಾನಿಟೈಸ್ ಮಾಡಲಾಗುತ್ತದೆ’ ಎಂದು ಹೇಳಿದರು.

ಅಂಕಿ ಅಂಶ

86 – ಜಿಲ್ಲೆಯಲ್ಲಿರುವ ಒಟ್ಟು ಆಂಬುಲೆನ್ಸ್‌ಗಳು

22 – 108 ತುರ್ತು ವಾಹನಗಳು

20 – ಸರ್ಕಾರಿ ಆಸ್ಪತ್ರೆಗಳ ಆಂಬುಲೆನ್ಸ್‌

44 – ಖಾಸಗಿ ಆಂಬುಲೆನ್ಸ್‌


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ