ಯಮಕನಮರಡಿ: ಪ್ರತಿಯೊಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮೊದಲ ಆದ್ಯತೆ ನೀಡುತ್ತಿದೆ. ಇದರ ಸದುಪಯೋಗ ಪಡೆಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಸುತಗಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದೆ ಶಿಕ್ಷಣ ಕೆಲವರ ಸ್ವತ್ತಾಗಿತ್ತು. ಆದ್ರೆ ಈಗ ಹಾಗಿಲ್ಲ. ಪ್ರತಿಯೊಂದು ಸರ್ಕಾರಗಳು ಮನೆ ಬಾಗಿಲಿಗೆ ಬಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರ ಸದುಪಯೋಗ ಪಡೆಸಿಕೊಳ್ಳಬೇಕು. ಮಕ್ಕಳು ಈ ದೇಶ ಆಸ್ತಿ. ಅವರಿಗೆ ಉನ್ನತ ಶಿಕ್ಷಣ ಕೊಡುಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸುದರು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ತಾಪಂ ಸದಸ್ಯರು, ಗ್ರಾಮದ ಹಿರಿಯ ಮುಖಂಡರು ಇದ್ದರು.