ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ತಾಂಡಾವೊಂದರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಜೂನ್ 24 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೀದಿ ದೀಪದ ಬೆಳಕಲ್ಲಿ ವಿದ್ಯಾರ್ಥಿನಿ ಓದಿಕೊಳ್ಳುತ್ತಿದ್ದ ವೇಳೆ ಮಾತನಾಡಿಸುವ ನೆಪದಲ್ಲಿ ಸಮೀಪಕ್ಕೆ ಬಂದಿದ್ದ ವಿವಾಹಿತ, ವಿದ್ಯಾರ್ಥಿನಿ ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದರಿಂದ ಅಕ್ಕಪಕ್ಕದವರು ಧಾವಿಸಿ ಬಂದಿದ್ದಾರೆ. ಆಗ ಭಯದಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮರುದಿನ ಬೆಳಿಗ್ಗೆ ಪೋಷಕರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಮುಂಬೈನಿಂದ ಬಂದಿರುವ ಅದೇ ತಾಂಡಾದ ವಿವಾಹಿತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
Laxmi News 24×7