Home / ರಾಜಕೀಯ / ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

Spread the love

ಕೇರಳ : ಸಿಪಿಐ ನೇತೃತ್ವದ ಎಲ್‌ಡಿಎಫ್‌ನ ಮಿತ್ರಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್ (ಐಎನ್‌ಎಲ್) ನ ನಾಮನಿರ್ದೇಶಿತ ಶಾಸಕರಾದ ದೇವರಕೋವಿಲ್ ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ವಿಶೇಷವೆಂದರೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ಯಾರೂ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ.

ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತಲೆಕೆಳಗಾಗಿದ್ದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ನಂತರ ತಮ್ಮ ಭಾಷಣಕ್ಕೆ ಮುಂದಾದರು. ಇದರ ನಡುವೆ ಕಾರ್ಯಕ್ರಮವನ್ನು ವರದಿ ಮಾಡಲು ಅಲ್ಲಿ ನೆರೆದಿದ್ದ ಕೆಲವು ಮಾಧ್ಯಮದವರು ರಾಷ್ಟ್ರಧ್ವಜಕ್ಕೆ ಆದ ಅವಮಾನವನ್ನು ಎತ್ತಿ ತೋರಿಸಿದರು. ವಿಷಯ ಗೊತ್ತಾಗುತ್ತಿದ್ದಂತೆ ಸಚಿವರು ಹಿಂತಿರುಗಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಮತ್ತೆ ಸರಿಯಾಗಿ ಹಾರಿಸಿದರು.

ಈ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿ ಭಾರೀ ವಿವಾದಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ. ಸುರೇಂದ್ರನ್ ಅವರು ಸಚಿವ ದೇವರಕೋವಿಲ್ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಹಾಗೂ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಘಟನೆಗೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ