Breaking News

ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ

Spread the love

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು
ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.


Spread the love

About Laxminews 24x7

Check Also

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Spread the loveಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ