Breaking News

ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.

Spread the love

ಲಡಾಖ್: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.

ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಈ ಬೆಳವಣಿಗೆ ನಡೆದಿರುವ ಕಾರಣ ತನಿಖಾ ಸಂಸ್ಥೆಗಳು ಗೂಢಚರ್ಯೆ ದೃಷ್ಟಿಕೋನದಿಂದ ತನಿಖೆ ಕೈಗೊಂಡಿವೆ. ಚಿಣಾ ಸೇನೆ ಈ ಭಾಗದ ಭಾರತೀಯ ಸೈನ್ಯದ ತಾಣಗಳ ಮೇಲೆ ಬೇಹುಗಾರಿಕೆ ನಡೆಸಿರಬಹುದೆಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

Spread the love    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ