ಮೈಸೂರು : ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಬಾರಿ ವಿಜೃಂಬಣೆ ದಸತಾ ನಡೆಯೋಲ್ಲ, ಆದರೆ ಸಂಪ್ರದಾಯಿಕ ದಸರಾಗೆ ಧಕ್ಕೆ ಆಗಲ್ಲ, ಕೇವಲ ನೂರು ಮಂದಿಗಷ್ಟೇ ಅರಮನೆಯೊಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಲಾಗಿದೆ, ದಸರಾದಲ್ಲಿ ಭಾಗಿಯಾಗುವ ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದರು.
ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.