Breaking News
Home / ಜಿಲ್ಲೆ / ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.

ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.

Spread the love

ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. 

ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು. ಕೆಲವೆಡೆ ಸರಿಯಾದ ವ್ಯವಸ್ಥೆ ಇಲ್ಲ ಎಂಬ ಆರೋಪ ಬಂದಿದೆ. ಅಂತ ಆರೋಪ ಮತ್ತೆ ಬರಕೂಡದು. ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ದೂರು ಬಂದರೆ ಸುಮ್ಮನಿರಲ್ಲ ಎಂದು ಸಚಿವ ನಾರಾಯಣ ಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಕ್ರಮವಹಿಸಲು ಮೊನ್ನೆ ವಿಡಿಯೊ ಕಾನ್ಫರೆನ್ಸ್ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ನಿನ್ನೆ ಆದಿಚುಂಚನಗಿರಿ ಶ್ರೀಗಳ ಸಾನ್ನಿಧ್ಯದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿದ್ದರು. ಇಂದು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ