Breaking News

ಕೊರೋನಾ ಯುದ್ಶದಲ್ಲಿ ಗೆದ್ದು ಗುಣಮುಖರಾಗಿ ಮನೆಗಳಿಗೆ ತೆರಳಿದ ಮುಂಬೈ ಕನ್ನಡಿಗರು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿ ತಮ್ಮ ಮನೆಗಳಿಗೆ ತೆರಳಿದರು.

Spread the love

ಮಂಡ್ಯ ಕೃಷ್ಣರಾಜಪೇಟೆಯ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಗುಣಮುಖರಾಗಿರುವ ಮುಂಬೈ ಕನ್ನಡಿಗರಿಗೆ

ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿಡುಗಡೆ ಪತ್ರವನ್ನು ನೀಡಿ ಅಗತ್ಯ ಆರೋಗ್ಯ ಮುನ್ಸೂಚನೆಯನ್ನು ನೀಡಿ ಶುಭ ಹಾರೈಸಿ ಬೀಳ್ಕೊಟ್ಟರು.

ಕಳೆದ 14ದಿನಗಳಿಂದಲೂ ಹೋಂ ಕ್ವಾರಂಟೈನ್ ನಲ್ಲಿದ್ದು ಕೊರೋನಾ ಟೆಸ್ಟಿಂಗ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶದಲ್ಲಿ ಗೆದ್ದು ಬಂದಿರುವ ಮುಂಬೈ ಕನ್ನಡಿಗರಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶುಭ ಹಾರೈಸಿ ಬಿಡುಗಡೆ ಪತ್ರಗಳನ್ನು ನೀಡಿ ಬೀಳ್ಕೊಟ್ಟರು.

ಕೊರೋನಾ ಮಹಾಮಾರಿಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಗೆಲ್ಲಬೇಕು.ವಯಕ್ತಿಕ ಸ್ವಚ್ಛತೆಗೆ ಒತ್ತು ನೀಡಬೇಕು.

ಈಗ ಬಿಡುಗಡೆಗೊಂಡು ಮನೆಗೆ ಹೋಗುತ್ತಿರುವವರು ತಮ್ಮ ತಮ್ಮ ಮನೆಗಳಲ್ಲಿಯೇ 14ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರಬೇಕು.

ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಸೇವಿಸಿ ಆರೋಗ್ಯವಂತರಾಗಬೇಕು ಎಂದು ಜಿಲ್ಲಾಧಿಕಾರಿಗಳು ಕೈಮುಗಿದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕೊರೋನಾ ಸಂಕಷ್ಠದ ಸಮಯದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಮೊರಾರ್ಜಿ ದೇಸಾಯಿ ವಸತಿಶಾಲೆಯ ಸಿಬ್ಬಂಧಿಗಳಿಗೆ ಜಿಲ್ಲಾಧಿಕಾರಿ ಫುಡ್ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಜಿಲ್ಲಾ ಬಿಸಿಎಂ ಅಧಿಕಾರಿ ಸೋಮಶೇಖರ್, ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಪ್ರಸನ್ನಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಜಿಲ್ಲಾ ನೋಡೆಲ್ ಆರೋಗ್ಯಾಧಿಕಾರಿ ಡಾ. ಬೆಟ್ಟಸ್ವಾಮಿ, ತಾಲ್ಲೂಕು ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ರಾಜಶ್ವನಿರೀಕ್ಷಕ ರಾಜಮೂರ್ತಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲೋಕೇಶ್, ಡಾ.ಜಯರಾಂ, ಕೆಇಬಿ ಎಇಇ ರಾಜಶೇಖರ ಮತ್ತಿತರರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಪಿ ಲಂಕೇಶ್ ಮೊಮ್ಮಗ, ಚಿತ್ರರಂಗಕ್ಕೆ

Spread the loveSamarjit Lankesh: ಪಿ ಲಂಕೇಶ್ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಬರಲು ರೆಡಿಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ