Breaking News
Home / ಜಿಲ್ಲೆ / ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.

ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.

Spread the love

ಮಂಡ್ಯ :ವಿಶ್ವವೇ ಮೆಚ್ಚುವಂತೆ ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋಧಿ ಅವರ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.

ಮಂಡ್ಯ ಜಿಲ್ಲೆ ಅತ ಆಗಿರುವ 9, 10 ಹಾಗೂ 11ನೇ ವಾರ್ಡುಗಳಲ್ಲಿ ಕೇಂದ್ರ ಸರ್ಕಾರದ 1 ವರ್ಷದ ಸಂಪೂರ್ಣ ಪ್ರಗತಿಯ ಚಿತ್ರಣವನ್ನು ಒಳಗೊಂಡಿರುವ ಕರಪತ್ರಗಳನ್ನು ವಿತರಿಸಿದ ಕೆ.ಆರ್.ಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೊರೋನಾ ಸಂಕಷ್ಠದ ಸಮಯದಲ್ಲಿಯೂ ಅಭಿವೃದ್ಧಿ ಹಾಗೂ ಜನತೆಯ ಆರೋಗ್ಯವನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಪ್ರಧಾನಿ ನರೇಂದ್ರಮೋಧಿ ಅವರು ಸುಭದ್ರವಾದ ದಕ್ಷ ಆಡಳಿತ ನೀಡುವ ಮೂಲಕ ವಿಶ್ವವೇ ಮೆಚ್ಚುವ ಸಮರ್ಥ ನಾಯಕನಾಗಿ ಹೊರಹೊಮ್ಮಿದ್ದಾರೆ.

ರಾಜ್ಯದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತಪರವಾದ ಆಡಳಿತ ನೀಡುತ್ತಿದ್ದಾರೆ. ಮುಂಬರುವ ಗ್ರಾಮಪಂಚಾಯಿತಿ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಜನಪರವಾದ ಆಡಳಿತವನ್ನು ಅಧಿಕಾರಕ್ಕೆ ತರಬೇಕು ಎಂದು ಪರಮೇಶ್ ಅರವಿಂದ್ ಮನವಿ ಮಾಡಿದರು.

ಕರಪತ್ರ ವಿತರಣಾ ಅಭಿಯಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರೆಸ್ ಕುಮಾರಸ್ವಾಮಿ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಮಹಿಳಾ ಮುಖಂಡರಾದ ಲತಾಮುರಳಿ, ಚಂದ್ರಕಲಾರಮೇಶ್, ಮಹಾದೇವಿನಂಜುಂಡ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹವಾಮಾನ ಪ್ರತಿಕೂಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

Spread the loveನವದೆಹಲಿ: ರಾಷ್ಟ್ರದ ರಾಜಧಾನಿಯ ಹವಾಮಾನ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿದೆ. ಗಾಳಿಯ ಗುಣಮಟ್ಟ ಅಪಾಯಕಾರಿ ಹಂತ ತಲುಪಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ