ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ತಾಲೂಕು ಕಚೇರಿಗೆ ತೆರಳಿದ ಕನ್ನಡ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮದ್ಯ ಮಾರಾಟ ಸ್ಥಗಿತಕ್ಕೆ ಆಗ್ರಹಿಸಿದರು.
ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು.
ಮದ್ಯ ಮಾರಾಟದ ಜತೆಗೆ ಗುಟ್ಕಾ ಮಾರಾಟಕ್ಕೂ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ತಕ್ಷಣ ಮಾರಾಟ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕನ್ನಡ ಸೇನೆ ತಾಲೂಕು ಅಧ್ಯಕ್ಷ ಸಿ.ದೇವಾ, ಉಪಾಧ್ಯಕ್ಷ ಸೋಮಶೇಖರ್, ಜನಜಾಗೃತಿ ವೇದಿಕೆ ಅಧ್ಯಕ್ಷೆ ಹಾರೋಹಳ್ಳಿ ಎನ್.ಇಂದ್ರಮ್ಮ ಇತರರಿದ್ದರು.