Breaking News
Home / ಜಿಲ್ಲೆ / ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ

ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ

Spread the love

ಮೈಸೂರು : ಅಂತರ್ಜಾತಿ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾದ ಕಾರಣ ಕತ್ತು ಕುಯ್ದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ, ಆಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ