ಮಂಡ್ಯ ನಾಗಮಂಗಲ: ತಾಲ್ಲೂಕಿನ ವೃತ್ತಿ ರಂಗಭೂಮಿ ಕಲಾವಿದರಿಗೆ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಿಂದ ಫುಡ್ ಕಿಟ್ ವಿತರಣೆ.
ಕೋವಿಡ್-19 ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ.
ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವೃತ್ತಿ ಭೂಮಿ ಕಲಾವಿದರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ನಮ್ಮ ತಾಲೂಕಿನಲ್ಲಿರುವ ಜನ ನಾಟಕದ ಗೀಳಿಗೆ ಬಿದ್ದು ಅವರು ಸಂಪೂರ್ಣವಾದ ಜೀವನವನ್ನು ವೃತ್ತಿ ರಂಗಭೂಮಿ ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇಂಥ ಕಲಾವಿದರಿಗೆ ಸರ್ಕಾರವಾಗಲಿ ಅಥವಾ ಯಾವ ಸಂಘ ಸಂಸ್ಥೆಗಳಾಗಲೀ ಸಹಾಯ ಮಾಡಲು ಮುಂದೆ ಬಂದಿಲ್ಲ. ಇಂತಹ ಕಲಾವಿದರಿಗೆ ಸರ್ಕಾರ ಸಹಾಯ ಹಸ್ತ ಚಾಚಬೇಕೆಂದು ಇದೇ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಾಸೇಗೌಡ, ದೇವಲಾಪುರ ತಾಲ್ಲೂಕು ಪಂಚಾಯಿತಿ ಸದಸ್ಯ ಹೇಮರಾಜು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಸಿ.ಜೆ ಕುಮಾರ್, ಕಂಟ್ರಾಕ್ಟರ್ ವೆಂಕಟೇಶ್, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾಗೇಶ್, ಹಾಗೂ ಹಿರಿಯ ರಂಗಭೂಮಿ ಕಲಾವಿದರು ಹಾಜರಿದ್ದರು.