Breaking News
Home / ಜಿಲ್ಲೆ / ಸರ್ಕಾರದ ಆದೇಶವನ್ನು ಪಾಲಿಸಿ:ಎನ್ ಎಸ್ ಎಫ್ ತಂಡದಿಂದ ಮನವಿ

ಸರ್ಕಾರದ ಆದೇಶವನ್ನು ಪಾಲಿಸಿ:ಎನ್ ಎಸ್ ಎಫ್ ತಂಡದಿಂದ ಮನವಿ

Spread the love

ಮೂಡಲಗಿ: ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಕೊರೊನಾ ಸೊಂಕು ಧೃಡಪಟ್ಟಿರುವ ಹಿನ್ನಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್‍ಎಸ್‍ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಬುಧವಾರದಂದು ಮುಧೋಳದ ವ್ಯಕ್ತಿಯೊರ್ವನಿಗೆ ಕೊರೊನಾ ವೈರಸ್ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಧೋಳಕ್ಕೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿಶೇಷ ಮನವಿಯನ್ನು ಅಧಿಕಾರಿಗಳ ತಂಡ ಮಾಡಿಕೊಂಡಿತ್ತು.


ಕೊರೊನೊ ಹಿನ್ನಲೆಯಲ್ಲಿ ಈಗಾಗಲೇ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಉಳಿದುಕೊಳ್ಳಬೇಕು. ಹೊರಗಡೆ ಯಾರು ಬರಬಾರದು. ಅಗತ್ಯವಿರುವ ಕೆಲಸಗಳಿಗೆ ಮಾತ್ರ ಹೊರಬಂದಲ್ಲಿ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್‍ಗಳನ್ನು ಹಾಕಿಕೊಳ್ಳಬೇಕು. ಇದರ ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನೊ ಬಗ್ಗೆ ಎಚ್ಚರದಿಂದ ಇರುವಂತೆ ಯುವ ಧುರೀಣ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರತಿನಿಧಿಯಾಗಿ ಸ್ಥಳಕ್ಕೆ ಧಾವಿಸಿದ ನಾಗೇಶ ಶೇಖರಗೋಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೂಡಲಗಿ ತಹಶೀಲದಾರ ದಿಲಶಾದ ಮಹಾತ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ, ಕುಲಗೋಡ ಠಾಣೆಯ ಪಿಎಸ್‍ಐ ಹಣಮಂತ ನೆರಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ, ನಿಂಗಪ್ಪ ಕುರಬೇಟ, ಬಸವರಾಜ ಹತ್ತರಕಿ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ