ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ.
ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ
Laxmi News 24×7