ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ ( Muslim community ) ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ( College ) ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.