Breaking News
Home / ಜಿಲ್ಲೆ / ದ್ವಿತೀಯ PUC ಪರೀಕ್ಷೆ: ಅಕ್ರಮ ತಡೆಗಟ್ಟಲು ಹೊಸ ರೂಲ್ಸ್ , ಹುಷಾರಾಗಿರಿ…!

ದ್ವಿತೀಯ PUC ಪರೀಕ್ಷೆ: ಅಕ್ರಮ ತಡೆಗಟ್ಟಲು ಹೊಸ ರೂಲ್ಸ್ , ಹುಷಾರಾಗಿರಿ…!

Spread the love

ಬೆಂಗಳೂರು, [ಫೆ.23]: ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 4 ರಿಂದ ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ.

2020-201ನೇ ಸಾಲಿನ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ

ಇದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಆಗುವ ಅಕ್ರಮಗಳನ್ನ ತಡೆಗಟ್ಟಲು ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಈ ಬಗ್ಗೆ 11 ಅಂಶಗಳ ನಿಯಮಗಳನ್ನ ಜಾರಿಗೆ ತಂದು ಸುತ್ತೋಲೆ ಹೊರಡಿಸಿದೆ.

100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ಹೀಗಿದೆ ನೋಡಿ: ನೀವೂ ಒಂದ್ಸಲ ಚೆಕ್ ಮಾಡಿ

ಪರೀಕ್ಷಾ ಅಕ್ರಮದಲ್ಲಿ ತೊಡಗಿದವರಿಗೆ ನಿಯಮದ ಪ್ರಕಾರ 5 ವರ್ಷ ಸೆರೆವಾಸ ಮತ್ತು 5 ಲಕ್ಷ ದಂಡ ವಿಧಿಸುವ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶ ಹೊರಡಿಸಿದೆ.
SSLC, PUC ಪರೀಕ್ಷೆ: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

ಇಷ್ಟೇ ಅಲ್ಲದೇ ಪಿಯಸಿ ಬೋರ್ಡ್ ಹಲವು ಭದ್ರತಾ ನಿಯಮಗಳನ್ನ ಜಾರಿಗೆ ತಂದಿವೆ. ಈ ಸಂಬಂಧ ಪಿಯುಸಿ ಬೋರ್ಡ್ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅವು ಈ ಕೆಳಗಿನಂತಿವೆ.

ಪ್ರಮುಖ ನಿಯಮಗಳು
* ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ಮೊಬೈಲ್ ಫೋನ್ ತರುವುದನ್ನು ನಿಷೇಧಿಸಲಾಗಿದೆ.
* ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅನುಮತಿ.
* ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳಿಗೂ ಗುರುತಿನ ಚೀಟಿ ಧರಿಸುವುದು.
*ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಮಾಡಿದ್ರೆ ಪೊಲೀಸ್ ಠಾಣೆಯಲ್ಲಿ FIR.
* ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧ ಪ್ರದೇಶ.
* ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ [ಇ-ಕ್ಯಾಮರ, ಲ್ಯಾಪ್ ಟಾಪ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನ ತರುವುದನ್ನ ನಿಷೇಧಿಸಲಾಗಿದೆ.
* ಯಾವುದೇ ವಿದ್ಯುನ್ಮಾನ ಉಪಕರಣಗಳನ್ನ ಹೊಂದುವುದು ಶಿಕ್ಷಾರ್ಹ ಅಪರಾಧ
* ನಕಲು ಮಾಡೋದು, ನಕಲಿಗೆ ಸಹಕಾರ, ಬದಲಿ ವ್ಯಕ್ತಿ ಪರೀಕ್ಷೆ ಬರೆಯೋದು, ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ಮೊಬೈಲ್ ಬಳಕೆಗಳು ಪರೀಕ್ಷಾ ಅಕ್ರಮ ಅಂತ ಪರಿಗಣನೆ
* ಕೊಠಡಿ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು ಅಕ್ರಮ ಎಸಗಿದರೆ ಕಾನೂನು ಅನ್ವಯ ಕ್ರಮಕ್ಕೆ ಸೂಚನೆ
* ಸಾಮಾನ್ಯ ವಾಚ್ ಗಳನ್ನು ಮಾತ್ರ ವಿದ್ಯಾರ್ಥಿಗಳಿಗೆ ಧರಿಸಲು ಅವಕಾಶ
*ಪರೀಕ್ಷೆ ಅಕ್ರಮಗಳಿಗೆ ಶಿಕ್ಷೆ[ಮೇಲ್ಕಂಡ ಅಪರಾಧಗಳಲ್ಲಿ ಭಾಗಿಯಾದಲ್ಲಿ 5 ವರ್ಷಗಳ ಕಾಲ ಸೆರೆವಾಸ ಅಥವಾ 5 ಲಕ್ಷ ರೂ ದಂಡ ಅಥವಾ ಎರಡನ್ನೂ ವಿಧಿಸಬಹುದು.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ