Breaking News
Home / ಜಿಲ್ಲೆ / ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.

Spread the love

ಉಪವಾಸ ವ್ರತವನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸುವ ರಂಜಾನ್ ಹಬ್ಬವನ್ನು ಅವರವರ ಮನೆಯಲ್ಲಿಯೇ ಆಚರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮಂಡ್ಯ ಕೃಷ್ಣರಾಜಪೇಟೆ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದರು

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.

ಮುಸ್ಲಿಂ ಬಂಧುಗಳು ವಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು, ಆರೋಗ್ಯತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಬೇಕು.

ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಮುಸ್ಲಿಂ ಬಂಧುಗಳು ಈ ಬಾರಿ ಅತ್ಯಂತ ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಿ ಕೊರೋನಾ ಹಾವಳಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಬ್ಯಾಟರಾಯಗೌಡ ಕರೆ ನೀಡಿದರು.

 

ಕೃಷ್ಣರಾಜಪೇಟೆ ಪಟ್ಟಣದ ಟೌನ್ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ಸದಸ್ಯರಾದ ಖಮ್ಮರ್ ಬೇಗಂ, ಮಾಜಿಸದಸ್ಯ ನವೀದ್ ಅಹಮದ್, ಶಬೀರ್, ನಿಸಾರ್ ಅಹಮದ್ ಸೇರಿದಂತೆ 25ಕ್ಕೂ ಹೆಚ್ಚಿನ ಮುಸ್ಲಿಂ ಬಾಂಧವರು ಸಭೆಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ