Home / ಜಿಲ್ಲೆ / ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮೇಲೆ ಕಿಡಿಗೇಡಿಗಳು ಹಲ್ಲೆ ನಡಿಸಿದರು

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮೇಲೆ ಕಿಡಿಗೇಡಿಗಳು ಹಲ್ಲೆ ನಡಿಸಿದರು

Spread the love

ರಾಯಬಾಗ ತಾಲೂಕಿನ ಕುಡಚಿಯಲ್ಲಿ ಕೊರೋನಾ ವೈರಸ್ 4 ಪ್ರಕರಣಗಳು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮೊದಲ ಹಂತ ಅಂದರೆ ಪ್ರಾಥಮಿಕವಾಗಿ ಅವರೊಂದಿಗೆ ಸಂಪರ್ಕದಲ್ಲಿದ್ದ 40 ಜನರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಇನ್ನೂ ಎರಡನೇ ಹಂತದಲ್ಲಿ ಇರುವ ಜನರನ್ನು ಪತ್ತೆ ಹಚ್ಚಲು ಹಾಗೂ ಆರೋಗ್ಯ ವಿಚಾರದಲ್ಲಿ ಸಮೀಕ್ಷೆ ಕಾರ್ಯ ನಡೆಸಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮುಂದಾದ ಸಂದರ್ಭದಲ್ಲಿ ಕಿಡಿಗೇಡಿಗಳು ಹಲ್ಲೆ ನಡೆಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ಈ ಹಿನ್ನಲೆಯಲ್ಲಿ ಕುಡಚಿ ಪಟ್ಟಣಕ್ಕೆ ಭೇಟಿ ನೀಡಿ, ಪೊಲೀಸ್ ಠಾಣೆ ಹೊರ ಭಾಗದಲ್ಲಿ ಸಭೆ ನಡೆಸಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರನ್ನು ಭೇಟಿಯಾಗಿ, ಸಮಾಧಾನ ಪಡಿಸಿ ಧೈರ್ಯ ತುಂಬಲಾಯಿತು ಹಾಗೂ ಮುಸ್ಲಿಂ ಸಮಾಜದ ಮೌಲಿಗಳು ಹಾಗೂ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕುಡಚಿ ಪಟ್ಟಣವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವುದರಿಂದ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಎಲ್ಲರ ಮೇಲೆ ನಿಗಾ ಇಡುವ ಅಗತ್ಯತೆ ಕುರಿತು ಸೂಕ್ತ ತಿಳಿವಳಿಕೆ ಹೇಳಿ ಮನವರಿಕೆ ಮಾಡಿ, ಅನಗತ್ಯ ತೊಂದರೆ ನಡೆಸಿದರೆ ಅಗತ್ಯ ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ತಿಳಿ ಹೇಳಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಅಣ್ಣಾಸಾಹೇಬ್ ಜೊಲ್ಲೆ, ಅಥಣಿ ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎಸ್.ವಿ ಗಿರೀಶ್, ಶಾಸಕರಾದ ಪಿ.ರಾಜೀವ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ