ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇ ವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು.
‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ ಎಂದು ಡಾ.ವೇದಮೂರ್ತಿ ತಿಳಿಸಿದರು.
‘ಸಿಬ್ಬಂದಿ ಹೆದರುವ ಅವಶ್ಯಕತೆ ಇಲ್ಲ. ಕೊರೊನಾ ಸೋಂಕು ಹರಡದಂತೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಿ’ ಎಂದು ಹೇಳಿದರು.ರಾಘವೇಂದ್ರ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಹಾಗೂ ಮಧುಮೇಹ ಕಾಯಿಲೆಗಳು ಇದ್ದವು.
Laxmi News 24×7