Breaking News

ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Spread the love

ಬೆಂಗಳೂರು: ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ

ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇನ್ನು, ರಾಜ್ಯ ಹವಾಮಾನ ಇಲಾಖೆ ನೀಡಿದ ಮಾಹಿತಿ ಆಧಾರದ ಮೇರೆಗೆ ಮುಂಜಾಗೃತ ಕ್ರಮವಾಗಿ ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ