ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಯುವರಾಜ ಕದಂ, ಉಪಾಧ್ಯಕ್ಷ ಮಹಾದೇವಿ ಖಾನಗೌಡರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು.
ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷರ ಕಚೇರಿಯಲ್ಲಿ ಶುಕ್ರವಾರ ಸನ್ಮಾನಿಸಿದ ಅವರು, ಎಪಿಎಂಸಿ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಎಲ್ಲ ಸದಸ್ಯರು ಹಾಜರಿದ್ದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??