Breaking News

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ

Spread the love

ರಾಯಚೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ ಎಂದು ಸ್ವಾಮೀಜಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ

ಇನ್ನೂ 14-15 ವರ್ಷ ದಾಟದವರು ಕೂಡ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್​ಗೆ ಆದ ಗತಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಸಿದ್ಧಲಿಂಗ ಸ್ವಾಮೀಜಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಸಿದ್ಧಲಿಂಗ ಸ್ವಾಮೀಜಿ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಚೋದನಕಾರಿ ಭಾಷಣ ಮಾಡಿರುವ ಸ್ವಾಮೀಜಿ ವಿರುದ್ಧ ರಾಯಚೂರಿನ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ


Spread the love

About Laxminews 24x7

Check Also

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ

Spread the loveಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ