ರಾಯಚೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ಗೆ ಆದ ಗತಿಯೇ ಆಗುತ್ತದೆ ಎಂದು ಸ್ವಾಮೀಜಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ
ಇನ್ನೂ 14-15 ವರ್ಷ ದಾಟದವರು ಕೂಡ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್ಗೆ ಆದ ಗತಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಸಿದ್ಧಲಿಂಗ ಸ್ವಾಮೀಜಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.
ಸಿದ್ಧಲಿಂಗ ಸ್ವಾಮೀಜಿ ಹೇಳಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಚೋದನಕಾರಿ ಭಾಷಣ ಮಾಡಿರುವ ಸ್ವಾಮೀಜಿ ವಿರುದ್ಧ ರಾಯಚೂರಿನ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ