Breaking News

ತಿರುಪತಿ ತಿಮ್ಮಪ್ಪ ದೇಗುಲದ ಸಿಬ್ಬಂದಿಗೆ ಕೊರೊನಾ : 2 ದಿನ ಭಕ್ತರಿಗೆ ಪ್ರವೇಶ ನಿರ್ಬಂಧ

Spread the love

ತಿರುಪತಿ : ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪ ದೇಗುಲ ಬಂದ್ ಮಾಡಲಾಗಿದೆ.

ತಿರುಪತಿ ತಿರುಮಲ ದೇವಸ್ಥಾನಂಗೆ ಸಂಬಂಧಿಸಿದ ಪುರಾತನ ಶ್ರೀ ಗೋವಿಂದರಾಜಸ್ವಾಮಿ ಮಂದಿರದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬರೋಬ್ಬರಿ 83 ದಿನಗಳ ನಂತರ ತಿರುಪತಿ ತಿಮ್ಮಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎರಡು ದಿನ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.


Spread the love

About Laxminews 24x7

Check Also

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Spread the loveಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್  ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ  ಸಾವನ್ನಪ್ಪಿರುವ ಘಟನೆ ಹಾವೇರಿ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ