Breaking News

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್

Spread the love

ಕಾಂಗ್ರೆಸ್ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಿದ್ದಾರೆ.

ಸಾಮೂಹಿಕ ಹತ್ಯಾಚಾರದ ಸಂತ್ರಸ್ತೆ ಮನೆಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರು ತೆರಳುತ್ತಿದ್ದರು.

ಉತ್ತರ ಪ್ರದೇಶದ ಹತ್ರಾಸ್ ಗೆ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ಮುಖಂಡರನ್ನು ಯಮುನಾ ಎಕ್ಸಪ್ರೆಸ್ ಹೈವೇ ಹತ್ತಿರ ಪೊಲೀಸರು ತಡೆದಿದ್ದಾರೆ.

ವಶಕ್ಕೆ ಪಡೆದುಕೊಳ್ಳುವ ಮೊದಲು ಪೊಲೀಸರು ತಮ್ಮ ಮೇಲೆ ನೂಕಾಟ ನಡೆಸಿದ್ದಾರೆ. ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ನಾಲ್ಕು ಜನ ಹೊಲದಲ್ಲಿ ಮಾನಭಂಗ ಮಾಡಿದ್ದರಿಂದಾಗಿ ಆಕೆ ಸಾವನ್ನಪ್ಪಿದ್ದು, ದೇಶಾದ್ಯಂತ ಘಟನೆ ಕುರಿತು ಆಕ್ರೋಶ ವ್ಯಕ್ತವಾಗತೊಡಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ