Breaking News

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ

Spread the love

ಉತ್ತರಕನ್ನಡ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಸಂಜೆ ನಡೆದಿದೆ.

ಕಿರವತ್ತಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಗುರುತಿನ್ನೂ ಪತ್ತೆಯಾಗಿಲ್ಲ. ಮೃತರು ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಎಂದು ತಿಳಿದುಬಂದಿದೆ.

ಕಾರು ದೆಹಲಿ ನೋಂದಣಿಯನ್ನು ಹೊಂದಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.


Spread the love

About Laxminews 24x7

Check Also

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ.

Spread the loveಹುಕ್ಕೇರಿ : ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ. ವಿದ್ಯಾರ್ಥಿಗಳು ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ