ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.
ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ 54 ವರ್ಷದ ವ್ಯಕ್ತಿಗೆ ನಿನ್ನೆ ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದೊಯ್ಯಲು ಸೂಚಿಸಿದ್ದರು.