ಹುಬ್ಬಳ್ಳಿ : 104 ಆರೋಗ್ಯ ಸಹಾಯವಾಣಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಉದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ.
ಇಲ್ಲಿ ಸುಮಾರು 336 ಉದ್ಯೋಗಿಗಳು 104 ಕಾಲ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗೆ, ಅವರ ಆತಂಕ ನಿವಾರಣೆಯ ಚಾಣಾಕ್ಷತನ ನೋಡಿ ಸಂತಸವಾಯಿತು.
ಇದೇ ವೇಳೆ ಕಾಲ್ ಸೆಂಟರ್ ಗೆ ಕರೆ ಮಾಡಿದ ಇಬ್ಬರು ವ್ಯಕ್ತಿಗಳ ಜೊತೆಗೆ ಮಾತನಾಡಿ ಸ್ಥೈರ್ಯ ತುಂಬುವ ಕೆಲಸ ಮಾಡಿದೆನು.