Breaking News

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

 

ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 25ಕ್ಕೆ ಮುಂದೂಡಿ ಆದೇಶಿಸಿದರು.ದರ್ಶನ್ ತಮ್ಮ ಆಪ್ತ, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಇದ್ದರು. ದರ್ಶನ್ ಇಂದು ಆರಾಮಾಗಿಯೇ ನಡೆಯುತ್ತಾ ನ್ಯಾಯಾಲಯ ಸಂಕೀರ್ಣದ ಒಳಗೆ ಬಂದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ನ್ಯಾಯಾಲಯದಲ್ಲಿ ಮುಖಾಮುಖಿಯಾದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ