Breaking News

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳೆಲ್ಲಿ? ‘ಪೊಲೀಸರು ಪತ್ತೆ ಹಚ್ತಾರೆ’- ಜಿ.ಪರಮೇಶ್ವರ್

Spread the love

ಬೆಂಗಳೂರು: ”ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

 

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮವದವರ ಜೊತೆ ಮಾತನಾಡಿದ ಅವರು, ಸರ್ಕಾರವು ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ”ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ ಎಂಬುದನ್ನು ಪೊಲೀಸರು ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ?. ಅವರು ಕೂಡ ಸರ್ಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ?” ಎಂದು ತಿರುಗೇಟು ನೀಡಿದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ”ಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ, ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದಾರೆ” ಎಂದು ಹೇಳಿದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ