Breaking News

ಭೀಕರ ರಸ್ತೆ ಅಪಘಾತ.. ಬೆಳಗಾವಿ ಯೋಧ ರವಿ ಯಲ್ಲಪ್ಪ ಹುತಾತ್ಮ

Spread the love

ಬೆಳಗಾವಿ: ನಾಗಾಲ್ಯಾಂಡ್‌ನಲ್ಲಿ ಭೀಕರ ರಸ್ತೆ

 

ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ.

 

ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು.

ರವಿ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟಿದ್ದಾಗ ಈ ದುರಂತ ನಡೆದಿದೆ. ಕೆಳಗೆ ಜಿಗಿದ ಯೋಧರ ಮೇಲೆ ಸೇನಾ ವಾಹನ ಪಲ್ಟಿಯಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.

 

ರವಿ ಯಲ್ಲಪ್ಪ ಅವರು ನಾಗಾಲ್ಯಾಂಡ್ ರೈಫಲ್ಸ್‌ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಯೋಧ ರವಿ ಪತ್ನಿ ಶೀತಲ್, 8 ವರ್ಷದ ಪುತ್ರಿ, 8 ವರ್ಷದ ಪುತ್ರನನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹುತಾತ್ಮ ಯೋಧ ರವಿ ಅವರ ಮೃತದೇಹ ಸ್ವಗ್ರಾಮಕ್ಕೆ ಆಗಮಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ