Breaking News

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹ:

Spread the love

ಚಿಕ್ಕೋಡಿ : ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಜತೆಗೆ ಗ್ರಾಮಗಳನ್ನು ಸ್ಥಳಾಂತರಕ್ಕೆ ಒತ್ತಾಯಿಸಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ಸರಕಾರ ಕೇವಲ 10 ಸಾವಿರ ರೂ.ಪರಿಹಾರಧನ ನೀಡಿ ಕೈ ತೊಳೆದುಕೊಂಡಿದೆ. ಅದು ಸಹ ಕೆಲವರಿಗೆ ಮುಟ್ಟಿಲ್ಲ. ಹೀಗಾಗಿ ಪ್ರವಾಹ ಸಂತ್ರಸ್ತರ ಕುಟುಂಬಗಳಿಗೆ ಕೂಡಲೇ ಧನ ಸಹಾಯ ಒದಗಿಸಬೇಕು. ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ವಿಳಂಬ ಮಾಡಬಾರದು. ಪ್ರವಾಹ ಸಂತ್ರಸ್ತರಿಗೆ ಹಂಚಿಕೆ ಮಾಡಿರುವ ನಿವೇಶನಗಳಲ್ಲಿ ಸರಕಾರವೇ ಮನೆಗಳನ್ನು ನಿರ್ಮಿಸಿ ಹಕ್ಕು ಪತ್ರ ವಿತರಿಸಬೇಕು ಎಂದು ಆಗೃಹಿಸಿದರು.

ಪ್ರವಾಹದಿಂದ ಹಾನಿಗೊಳಗಾಗಿ ಸಂಪೂರ್ಣ ಸ್ಥಳಾಂತರಕ್ಕೆ ಅಗ್ರಹಿಸುತ್ತಿವೆಯೋ ಅವರಿಗೆ ಭೂಮಿ ಗುರುತಿಸಿ ಗ್ರಾಮಗಳನ್ನು ಆದಷ್ಟು ಬೇಗ ಸ್ಥಳಾಂತರ ಮಾಡಬೇಕು. ಸರಕಾರ ಭರವಸೆ ನೀಡಿದಂತೆ ಬಾಡಿಗೆ ಮನೆಗಳಲ್ಲಿ ವಾಸವಾಗಿರುವ ಸಂತ್ರಸ್ತ ಕುಟುಂಬಗಳಿಗೆ ತಿಂಗಳಿಗೆ 5000 ರೂ.ಗಳಂತೆ ಧನ ಸಹಾಯ ಘೋಷಣೆಯಂತೆ ಬಾಕಿ ಉಳಿದಿರುವ ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ ಎಸ್.ಎಸ್.ಸಂಪಗಾಂವಿಯವರಿಗೂ ಮನವಿ ಸಲ್ಲಿಸಿದರು.

ರೈತ ಸಂಘದ ವಕ್ತಾರ ತ್ಯಾಗರಾಜ ಕದಮ, ದೀಪಕ ಶಿಂಧೆ, ಬಿ.ಆರ್.ಸಂಗಪ್ಪಗೋಳ, ತುಕಾರಾಮ ಕೋಳಿ, ಎಸ್.ವೈ.ಹಂಜಿ, ಬಸವರಾಜ ಡಾಕೆ, ಶಂಕರ ಪಡೇದ, ರೇವಪ್ಪ ತಳವಾರ, ಶಿವಾನಂದ ಬ್ಯಾಳಿ, ಮಧುಕರ ಮಜಲಟ್ಟಿ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ..

Spread the loveಶಿರಗುಪ್ಪಿಯಲ್ಲಿ ರಕ್ತದಾನ ಶಿಬಿರ; ಡಾ.ಅಮೋಲ ಸರಡೆ ಅವರ ಕಾರ್ಯ ಶ್ಲಾಘನೀಯ: ರಾಜು ಕಾಗೆ.. ! ತಮ್ಮ ಹುಟ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ