Breaking News

……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ

Spread the love

ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ

ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ ಕಣದಲ್ಲಿ ಉಳಿದಿದ್ದ ಮೂರು ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊನೆ ಗಳಿಗೆವರೆಗೂ ಯಾರು ನಾಮ ಪತ್ರ ವಾಪಸ್ಸು ಪಡೆಯಲಿಲ್ಲ. ಜೂ.19ರಂದು ನಡೆದ ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ನಾಮ ಪತ್ರಗಳು ತಿರಸ್ಕøತಗೊಂಡಿದ್ದವು.

ಹೀಗಾಗಿ ರಾಜ್ಯಸಭೆ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಅವಿರೋಧ ಆಯ್ಕೆಯಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಚುನಾಯಿತ ರಾಗಿದ್ದ ಜಯಮ್ಮ, ಎನ್.ಎಸ್.ಬೋಸ್‍ರಾಜು, ಹೆಚ್.ಎಂ.ರೇವಣ್ಣ, ನಸೀರ್ ಅಹ್ಮದ್, ಎಂ.ಸಿ. ವೇಣುಗೋಪಾಲ್, ಡಿ.ಯು.ಮಲ್ಲಿಕಾರ್ಜುನ ಹಾಗೂ ಟಿ.ಎ.ಶರವಣ ಅವರು ಜೂ.30ರಂದು ನಿವೃತ್ತಿಯಾಗು ವುದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ನಾಳೆ ನಿವೃತ್ತಿ: ವಿಧಾನ ಪರಿಷತ್‍ಗೆ ಸರ್ಕಾರದಿಂದ ನಾಮ ನಿರ್ದೇಶಿತಗೊಂಡಿದ್ದ ಕೆ.ಅಬ್ದುಲ್ ಜಬ್ಬಾರ್, ಡಾ.ಜೈಮಾಲ ರಾಮಚಂದ್ರ, ಐವಾನ್ ಡಿಸೋಜ, ಇಕ್ಬಾಲ್ ಅಹ್ಮದ್ ಸರಡಗಿ ಹಾಗೂ ತಿಪ್ಪಣ್ಣ ಕಮಕನೂರ ಮೇಲ್ಮನೆ ಸದಸ್ಯ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ. ಈ ಐವರು ನಿವೃತ್ತಿಯಿಂದ ತೆರವಾಗುವ ಸ್ಥಾನಗಳಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಿದೆ.

 

Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ