Breaking News
Home / ರಾಜಕೀಯ / ವಿಜಯಪುರ ಅತ್ಯಾಚಾರಿ ಆತ್ಮಹತ್ಯೆ: ನಾಲ್ವರು ಪೊಲೀಸರ ಅಮಾನತು

ವಿಜಯಪುರ ಅತ್ಯಾಚಾರಿ ಆತ್ಮಹತ್ಯೆ: ನಾಲ್ವರು ಪೊಲೀಸರ ಅಮಾನತು

Spread the love

ವಿಜಯಪುರ, ಆಗಸ್ಟ್ 30: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂದಗಿ ಠಾಣೆಯ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ ಆರೋಪದ ಮೇರೆಗೆ ಪೊಲೀಸರ ಅಮಾನತು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮದ ಪ್ರಕಾರ ಕ್ರಮ ಕೈಗೊಂಡಿದ್ದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್ ಸಂಗಮೇಶ್ ಹೊಸಮನಿ, ಕಾನ್ಸ್‌ಟೇಬಲ್‌ಗಳಾದ ಎಚ್.ಸಿ. ಮಂತ್ರಿ, ಗುರುರಾಜ ಮಶಿಹಾಳ, ಆನಂದ ಪಾಟೀಲ್ ಎಂಬುವವರನ್ನು ಅಮಾನತು ಮಾಡಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಆದೇಶ ಹೊರಡಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ದೇವೇಂದ್ರ ಸಂಗೋಗಿ (40 ವರ್ಷ) ಎಂಬಾತನನ್ನು ಆಗಸ್ಟ್​ 28ರ ತಡರಾತ್ರಿ ವಶಕ್ಕೆ ಪಡೆಯಲಾಗಿತ್ತು. ಆದರೆ, ಭಾನುವಾರ (ಆಗಸ್ಟ್​ 29) ನಸುಕಿನ ವೇಳೆ ದೇವೇಂದ್ರ ಠಾಣೆಯ ಶೌಚಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸುವ ವೇಳೆ ಹಾಗೂ ನಂತರ ಕರ್ತವ್ಯ ಲೋಪವೆಸಗಲಾಗಿದೆ ಎಂಬ ಕಾರಣ ನೀಡಿ ಸಬ್ ಇನ್ಸಪೆಕ್ಟರ್ ಸಂಗಮೇಶ ಹೊಸಮನಿ, ಕಾನ್ಸ್‌ಸ್ಟೆಬಲ್‌​ಗಳಾದ ಎಚ್.ಸಿ. ಮಂತ್ರಿ, ಗುರುರಾಜ‌ ಮಶಿಹಾಳ, ಆನಂದ ಪಾಟೀಲ್‌ರನ್ನು ಅಮಾನತು ಮಾಡಲಾಗಿದೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಯುವಕ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಯುವಕ ದೇವೇಂದ್ರ ಸಂಗೋಗಿ ಪರಾರಿಯಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿತ್ತು.

ಸಿಂದಗಿ ಪೊಲೀಸರು ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ರಾತ್ರಿ ಆತನನ್ನು ಬಂಧಿಸಿದ್ದರು. ಆದರೆ, ಬೆಳಿಗ್ಗೆ ಆಗುವಷ್ಟರಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, “ನಸುಕಿನ ಜಾವ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ನಮ್ಮ ಸಿಬ್ಬಂದಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ,” ಎಂದಿದ್ದಾರೆ.

“ಲಾಕಪ್ ಡೆತ್ ಎನ್ನಬಹುದಾದರೂ ಪೊಲೀಸರ‌ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ. ನೇಣು ಹಾಕಿಕೊಂಡಿದ್ದ ಕಾರಣ‌ ಮೃತಪಟ್ಟಿದ್ದಾನೆ. ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ,” ಎಂದು ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಲಾಕ್‌ಅಪ್ ಡೆತ್ ಎಂದು ಪೋಷಕರು ಆರೋಪ ಮಾಡುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಘಟನೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, “ವಿಜಾಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದ ಲಾಕ್‌ಅಪ್ ಡೆತ್ ಘಟನೆ ಕುರಿತು ಸಿಐಡಿ ತನಿಖೆ ಮಾಡಲಿದ್ದು, ಕಾನೂನು ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತನಿಖೆ ನಡೆಸಲು ಸಿಐಡಿ ಪೊಲೀಸರು ಸಿಂದಗಿಗೆ ತೆರಳಿದ್ದು, ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡಲಿದ್ದಾರೆ,” ಎಂದು ಸಚಿವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ