Home / ಜಿಲ್ಲೆ / ಬೆಳಗಾವಿ / ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ

ಆಸ್ಪತ್ರೆ ಆರಂಭಿಸಿ ಚಿಕಿತ್ಸೆ ನೀಡದಿದ್ದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ

Spread the love

ಬೆಳಗಾವಿ, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೆ.ಪಿ.ಎಂ.ಇ. ಕಾಯ್ದೆ ಅಡಿ ನೋಂದಣಿಯಾಗಿರುವ ಎಲ್ಲ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳು ತಕ್ಷಣವೇ ಆಸ್ಪತ್ರೆಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಒಂದು ವೇಳೆ ಜನರಿಗೆ ವೈದ್ಯಕೀಯ ಸೇವೆ ನೀಡದಿದ್ದರೆ ಲೈಸೆನ್ಸ್ ರದ್ದುಪಡಿಸುವುದರ ಜತೆಗೆ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಕೋವಿಡ್ ಹೊರತುಪಡಿಸಿ ಇತರೆ ವೈದ್ಯಕೀಯ ಸೇವೆಗಳ ಅಗತ್ಯವಿರುತ್ತದೆ. ಆದ್ದರಿಂದ ಖಾಸಗಿ ವೈದ್ಯರು, ನರ್ಸಿಂಗ್ ಹೋಮ್ ಮತ್ತು ಕ್ಲಿನಿಕ್ ಗಳನ್ನು ತಕ್ಷಣವೇ ಆರಂಭಿಸಿ ಮಾರ್ಗಸೂಚಿ ಅನುಸರಿಸಿ ಜನರಿಗೆ ಸೇವೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ ಮೆಂಟ್ ಆಕ್ಟ್ (ಕೆಪಿಎಂಇಎ)ಪ್ರಕಾರ ನೋಂದಣಿ ಆಗಿರುವಂತಹ ವೈದ್ಯರು ಮತ್ತು ಎಲ್ಲ ಆಸ್ಪತ್ರೆಗಳು ಜನರಿಗೆ ಚಿಕಿತ್ಸೆ ನೀಡದಿದ್ದರೆ ಕಾನೂನಿ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ